ರಾಜ್ಯ

ಕೆಎಸ್‌ಡಿಎಲ್‌ ಹೊಸ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮ್ಮನ್ನಾ ಭಾಟಿಯಾ ನೇಮಕ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತ (KSDL – ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತಮ್ಮ ಉತ್ಪನ್ನಗಳ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎರಡು ವರ್ಷಗಳ ಅವಧಿಗೆ ತಮನ್ನಾ ಅವರಿಗೆ 6.20 ಕೋಟಿ ರೂ.ಗಳ ಸಂಭಾವನೆ ನೀಡಲಿದೆ.

ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯುವ ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯನ್ನಾಗಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ.

ಮೈಸೂರು ಸ್ಯಾಂಡಲ್ ಸೋಪ್, ಶತಮಾನಗಳ ಇತಿಹಾಸವಿರುವ ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿದೆ. ಇಂತಹ ಉತ್ಪನ್ನಕ್ಕೆ ಕನ್ನಡದ ನೆಲದ ಕಲಾವಿದರಾದ ಡಾ. ಶಿವರಾಜ್‌ಕುಮಾರ್, ಸುದೀಪ್, ಪುನೀತ್ ರಾಜ್‌ಕುಮಾ‌ರ್ ಸೇರಿದಂತೆ ಹಲವು ದಿಗ್ಗಜರು ಜಾಹೀರಾತು ರಾಯಭಾರಿಗಳಾಗಿದ್ದರು. ತಮನ್ನಾ ಭಾಟಿಯಾ ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್‌ನಲ್ಲಿ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಜತೆಗೆ ಗ್ಲಾಮರಸ್ ಕೂಡ ಆಗಿ ಕಾಣುತ್ತಾರೆ, ಇದನ್ನು ಗಮನಿಸಿ ಮಾರುಕಟ್ಟೆ ಬ್ರಾಂಡಿಂಗ್ ಲೆಕ್ಕಾಚಾರ ಹಾಕಿ ಅವರನ್ನು ರಾಯಭಾರಿ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಸರ್ಕಾರದ ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನೆರೆ ರಾಜ್ಯದ ನಟಿಗೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆ ನೀಡಿ ರಾಯಭಾರಿಯನ್ನಾಗಿ ನೇಮಿಸಿರುವುದಕ್ಕೆ ಹಲವು ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಅನ್ಯ ರಾಜ್ಯದ ನಟಿಯ ನೇಮಕದ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

37 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

1 hour ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

2 hours ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago