ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತ (KSDL – ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತಮ್ಮ ಉತ್ಪನ್ನಗಳ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎರಡು ವರ್ಷಗಳ ಅವಧಿಗೆ ತಮನ್ನಾ ಅವರಿಗೆ 6.20 ಕೋಟಿ ರೂ.ಗಳ ಸಂಭಾವನೆ ನೀಡಲಿದೆ.
ಹೊಸ ಗ್ರಾಹಕರು ಹಾಗೂ ಯುವ ಸಮೂಹವನ್ನು ಸೆಳೆಯುವ ಉದ್ದೇಶದಿಂದ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯನ್ನಾಗಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗಿದೆ.
ಮೈಸೂರು ಸ್ಯಾಂಡಲ್ ಸೋಪ್, ಶತಮಾನಗಳ ಇತಿಹಾಸವಿರುವ ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿದೆ. ಇಂತಹ ಉತ್ಪನ್ನಕ್ಕೆ ಕನ್ನಡದ ನೆಲದ ಕಲಾವಿದರಾದ ಡಾ. ಶಿವರಾಜ್‌ಕುಮಾರ್, ಸುದೀಪ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಹಲವು ದಿಗ್ಗಜರು ಜಾಹೀರಾತು ರಾಯಭಾರಿಗಳಾಗಿದ್ದರು. ತಮನ್ನಾ ಭಾಟಿಯಾ ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್‌ನಲ್ಲಿ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಜತೆಗೆ ಗ್ಲಾಮರಸ್ ಕೂಡ ಆಗಿ ಕಾಣುತ್ತಾರೆ, ಇದನ್ನು ಗಮನಿಸಿ ಮಾರುಕಟ್ಟೆ ಬ್ರಾಂಡಿಂಗ್ ಲೆಕ್ಕಾಚಾರ ಹಾಕಿ ಅವರನ್ನು ರಾಯಭಾರಿ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಸರ್ಕಾರದ ಈ ನಿರ್ಧಾರವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನೆರೆ ರಾಜ್ಯದ ನಟಿಗೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆ ನೀಡಿ ರಾಯಭಾರಿಯನ್ನಾಗಿ ನೇಮಿಸಿರುವುದಕ್ಕೆ ಹಲವು ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಅನ್ಯ ರಾಜ್ಯದ ನಟಿಯ ನೇಮಕದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…