Mysore
25
clear sky

Social Media

ಶನಿವಾರ, 18 ಏಪ್ರಿಲ 2026
Light
Dark

ಕೆಎಸ್‌ಡಿಎಲ್‌ ರಾಯಭಾರಿಯಾಗಿ ತಮನ್ನಾ ಆಯ್ಕೆ: ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಕೆಎಸ್‌ಡಿಎಲ್‌ ನೂತನ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಎಸ್‌ಡಿಎಲ್‌ನ ಬ್ರಾಂಡ್‌ ಅಂಬಾಸಿಡರ್‌ ಆಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.

ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್‌ ಅಂಬಾಸಿಡರ್‌ ಆಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಆಕ್ಷೇಪಾರ್ಹವಾಗಿದೆ.

ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಬಾಲಿವುಡ್‌ ನಟಿಗೆ ಅವಕಾಶ ನೀಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Tags:
error: Content is protected !!