ಬೆಂಗಳೂರು: ಕೆಎಸ್‌ಡಿಎಲ್ ನೂತನ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಎಸ್‌ಡಿಎಲ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.
ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಆಕ್ಷೇಪಾರ್ಹವಾಗಿದೆ.
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಬಾಲಿವುಡ್ ನಟಿಗೆ ಅವಕಾಶ ನೀಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…