ರಾಜ್ಯ

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ನಟ ವಿಜಯ್ ಅವರ ಅಭಿಮಾನಿ ಅಡುಗೆ ತಯಾರಕರಾದ ನಾಗರಾಜು ಮಾತನಾಡಿ, ಕಳೆದ ತಿಂಗಳು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಮುಖ್ಯಮಂತ್ರಿ ಆಗಲು ಬಹುಮತದ ಕೊರತೆ ಇದ್ದ ಹಿನ್ನೆಲೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಐದು ದಿನಗಳು ನಿರಂತರ ವಿವಿಧ ಪಕ್ಷಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿ ಅವರ ಬೆಂಬಲ ಪಡೆದು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಮುಂದಿನ ದಿನಗಳಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ ಸಿನಿಮಾರಂಗದಲ್ಲಿ ಜನ ಮನ್ನಣೆ ಗಳಿಸಿದಂತೆ ರಾಜಕೀಯದಲ್ಲಿಯೂ ಜನ ನಾಯಕರಾಗಿ ದೇಶದಲ್ಲಿಯೇ ಮಾದರಿ ಸಿಎಂ ಆಗಲಿ ಎಂದು ಶುಭ ಕೋರಿದರು.

ಹೂವಿನ ಅಂಗಡಿ ಮಾಲೀಕ ಮಹೇಶ್ ಮಾತನಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ನಟ ವಿಜಯ್ ರವರು ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆ ವಿವಿಧ ಪಕ್ಷಗಳು ಅವರಿಗೆ ಬೆಂಬಲವಾಗಿ ನಿಂತು ಸಹಕಾರ ನೀಡಿದ್ದಾರೆ. ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಮುಂದುವರಿಸಲಿ ಎಂದರು.

ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಟ ವಿಜಯ್ ರವರು ನಾನು ಯಾವುದೇ ತಪ್ಪು ಮಾಡೋದಿಲ್ಲ ನನ್ನ ಸಚಿವ ಸಂಪುಟದ ಯಾವ ಸಚಿವರು ಶಾಸಕರು ಜನರ ಭಾವನೆಗಳಿಗೆ ಧಕ್ಕೆ ಆಗದಂತೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಾದಂತೆ ಸೂಚನೆ ನೀಡಲಾಗಿದೆ. ಯಾವುದೇ ಸಚಿವರು ಶಾಸಕರು ತಪ್ಪು ಮಾಡಿದರೆ ಅಂತಹ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪದಗ್ರಹಣ ಕಾರ್ಯಕ್ರಮದಲ್ಲಿ ತಿಳಿಸಿರುವುದು ಸಂತಸದ ವಿಚಾರ ಎಂದರು.

ಇದೇ ವೇಳೆ ನಟ ವಿಜಯ್ ಅಭಿಮಾನಿಗಳಾದ ಗಂಗಾಧರ್ ಬಸವೇಗೌಡ ಮಹೇಶ್, ಚೇತನ್, ವಿಶ್ವ ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago