ಬೆಂಗಳೂರು: ರಾಜ್ಯದ ನಿಗಮ–ಮಂಡಳಿ ಅಧ್ಯಕ್ಷರು ಮತ್ತು ಸರ್ಕಾರದ ಪ್ರಮುಖ ಹುದ್ದೆಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 18 ಮಂದಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಇವರಲ್ಲಿ 12 ಶಾಸಕರು ಮತ್ತು ಮೂವರು ಪಕ್ಷದ ಕಾರ್ಯಕರ್ತರಿಗೆ ನಿಗಮ–ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ಸಿಕ್ಕಿದೆ. ಬೇಳೂರು ಗೋಪಾಲಕೃಷ್ಣ ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ, ಮಂಜುನಾಥ ಭಂಡಾರಿ ವಿಧಾನಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ನೇಮಕಗೊಂಡಿದ್ದಾರೆ.
ಇನ್ನು ಯಾವ ನಿಗಮ–ಮಂಡಳಿ ಯಾರಿಗೆ ಸಿಕ್ಕಿದೆ?
ಬಿ. ಶಿವಣ್ಣ ಅವರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆ. ಷಡಕ್ಷರಿ ಅವರಿಗೆ ರಾಜ್ಯ ಗಣಿ ನಿಗಮ, ಪಿ.ಎಂ. ಅಶೋಕ್ ಅವರಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಎ.ಆರ್. ಕೃಷ್ಣಮೂರ್ತಿ ಅವರಿಗೆ ಬಿಎಂಟಿಸಿ, ಹಂಪನಗೌಡ ಬಾದರ್ಲಿ ಅವರಿಗೆ ರಾಜ್ಯ ಉಗ್ರಾಣ ನಿಗಮ, ಡಿ.ಜಿ. ಶಾಂತನಗೌಡ ಅವರಿಗೆ ತ್ಯಾಜ್ಯ ನಿರ್ವಹಣಾ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿದೆ.
ಜಿ.ಎಚ್. ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಮಹಾಂತೇಶ್ ಕೌಜಲಗಿ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ, ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ನ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಎನ್.ಎಚ್. ಕೋನರಡ್ಡಿ ಅವರಿಗೆ ಕೃಷಿ ಬೆಲೆ ಆಯೋಗ, ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಅಲ್ಲಂಪ್ರಭು ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿದೆ.
ಶ್ಯಾಮ್ ನಾಟೇಕರ್ ಅವರಿಗೆ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ಹೆಚ್.ಸಿ. ಲಲಿತ್ ರಾಘವ್ ಅವರಿಗೆ ಸರ್ಕಾರಿ ವಿದ್ಯುತ್ ಕಾರ್ಖಾನೆ ಹಾಗೂ ಸುಭಾಷ್ ರಾಥೋಡ್ ಅವರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.



