ರಾಜ್ಯ

ಮತ ಚೋರಿ ತಡೆಗೆ ʻಕೈʼ ಕಾರ್ಯಪಡೆ : ರಾಜ್ಯದಲ್ಲಿ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು

ಬೆಂಗಳೂರು : ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆ, ಗಂಗಾನಗರದ 1ನೇ ಮುಖ್ಯ ರಸ್ತೆ ಮತ್ತು ಆನಂದನಗರದ ಏಟ್ರಿಯಾ ಕಾಲೇಜ್ ರಸ್ತೆಗಳಿಗೆ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆ ಬಿಡುವು ನೀಡಿದ್ದು, ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಮತ್ತು ರಸ್ತೆಗಳಿಗೆ ಡಾಂಬರೀಕರಣಗೊಳಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಉದ್ಯಾನವನಗಳ ನವೀಕರಣ, ಒಳಚರಂಡಿ ದುರಸ್ತಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮತ ಚೋರಿ ಪತ್ತೆಗೆ ಪಡೆ 2023 ರ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿಯೂ ಮತಚೋರಿ ಆಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಜನರು ಕ್ಷೇತ್ರದಲ್ಲಿ ವಾಸ ಮಾಡದಿದ್ದರೂ ಬೆಂಗಳೂರು ಹೊರವಲಯದಿಂದ ಚುನಾವಣೆ ದಿನ ಬಂದು ಮತ ಚಲಾಯಿಸಿ ಹೋಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಮತ್ತು ವಿಧಾಸನಭೆ ಚುನಾವಣೆಯಲ್ಲಿ ಈ ಮತಚೋರಿ ಮರಕಳಿಸದಂತೆ ಎಚ್ಚರಿಕೆ ವಹಿಸಲು ಈಗಿನಿಂದಲೇ ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಘೋಷಿಸಿದರು.

ಇದನ್ನೂ ಓದಿ:-ಭಾರತ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು : ಸಿ.ಎಂ ಕರೆ

ಕಾರ್ಯಪಡೆ ಕಾರ್ಯವ್ಯಾಪ್ತಿ ಇಡೀ ಹೆಬ್ಬಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ ಗಳಿಗೆ ಕಾಂಗ್ರೆಸ್ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಕಾರ್ಯಪಡೆ ಇರಲಿದ್ದು, ಇವುಗಳ ಸದಸ್ಯರು ತಮ್ಮ ವಾರ್ಡ್ ಗಳಿಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದಿಂದಲೇ ಖಚಿತ ಮತ ಪಟ್ಟಿಯನ್ನು ಪಡೆಯಲಿದ್ದಾರೆ. ಇದರ ಆಧಾರದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಮೂಲ ಮತದಾರರು ಆ ಮನೆಗಳಲ್ಲಿ ವಾಸಿಸುತ್ತಿದ್ದಾರೆಯೇ ಇಲ್ಲವೇ? ಎಂಬುದನ್ನು ಪತ್ತೆ ಮಾಡಲಿದ್ದಾರೆ.

ಆಯೋಗಕ್ಕೆ ಅನರ್ಹರ ಪಟ್ಟಿ ಹೀಗೆ ಪತ್ತೆ ಮಾಡಲಾದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಅನರ್ಹ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ. ಈ ಪಟ್ಟಿಯನ್ನು ಸಕಾಲಕ್ಕೆ ಚುನಾವಣೆ ಆಯೋಗಕ್ಕೆ ಸಲ್ಲಿಸಿ ಅನರ್ಹರನ್ನು ಮತ ಪಟ್ಟಿಯಿಂದ ಕೈಬಿಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಚಿವರು ವಿವರಣೆ ನೀಡಿದರು. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಸದ್ಯದಲ್ಲೇ ವಾರ್ಡ್ ಗಳಿಗೆ ಕಾರ್ಯಪಡೆಗಳ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇದು ಕೇವಲ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲ. ಮತದಾನ ಹಕ್ಕಿನ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಪಡೆಯೂ ಆಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

1 min ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

12 mins ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

31 mins ago

ವಿಶ್ವಕಪ್‌ ಗೆದ್ದ ಬಳಿಕ ರೈಲು ಹತ್ತಿ ಬಂದ ಶಿವಂ ದುಬೆ!

ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…

45 mins ago

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

1 hour ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

1 hour ago