ರಾಜ್ಯ

ಟ್ಯಾಟೂನಿಂದ ಎಚ್‌ಐವಿ, ಕ್ಯಾನ್ಸರ್‌ ಸಾಧ್ಯತೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಟ್ಯಾಟೂನಿಂದ ಎಚ್‌ಐವಿ ಹಾಗೂ ಚರ್ಮದ ಕ್ಯಾನ್ಸರ್‌ ಬರುವ ಸಾಧ್ಯತೆ ಇದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹೊಸ ಕಾನೂನು ರೂಪಿಸಲು ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಇಂದು (ಫೆ.28) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟ್ಯಾಟೂನಿಂದ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಇದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ನಿಯಮ ರೂಪಿಸುವ ಅವಕಾಶ ಕೂಡ ಇದೆ ಎಂದರು.

ಟ್ಯಾಟೂ ಇಂಕ್‌ ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಆಯುಕ್ತರಿಗೆ ಪತ್ರ ಬರೆದು ಮನವಿಗೆ ಸೂಚಿಸಲಾಗಿದೆ. ಹೀಗಾಗಿ ಪತ್ರ ಬರೆದು ಕಾನೂನು ರೂಪಿಸಲು ಮುಂದಾಗಿದ್ದೇವೆ ಎಂದರು.

ಈವರೆಗೆ 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ. ಇಡ್ಲಿ ಮಾಡುವಾಗ ಪ್ಲಾಸ್ಟಿಕ್‌ ಬಳಕೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದೆ. ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ತಿಳಿಸಿದರು.

ಹಾಗೆಯೇ 1133 ಔಷಧ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 938 ಔಷಧಗಳು ಗುಣಮಟ್ಟ ಹೊಂದಿವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

9 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

9 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago