Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.

ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ ಟಿಬಿ ಬೋರ್ಡ್‌ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ, ಸಿಇಓ, ರೈತರ ಸಮ್ಮುಖದಲ್ಲಿ ಡ್ಯಾಂಗೆ ಯಾವುದೇ ತೊಂದರೆಯಾಗದಂತೆ ಗೇಟ್‌ ಅಳವಡಿಕೆಯಾಗಲಿ ಎಂದು ಗುರುರಾಜ ಆಚಾರ್ಯ, ವಾದಿರಾಜ ಆಚಾರ್ಯರ ನೇತೃತ್ವದಲಲಿ ಮಹಾ ಸುದರ್ಶನ ಹೋಮ ಹಾಗೂ ರಕ್ಷಾ ಹೋಮದ ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು.

ಇದನ್ನು ಓದಿ: ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಪೂಜೆಯ ಬಳಿಕ ಆರಂಭದಲ್ಲಿ ಗ್ಯಾಸ್‌ ಕಟ್ಟರ್‌ ಮೂಲಕ ಕ್ರಸ್ಟ್‌ ಗೇಟ್‌ ಕಟ್ಟಿಂಗ್‌ ಮಾಡಿ ಮೇಲೆತ್ತಲು ಚಾಲನೆ ನೀಡಲಾಯಿತು.

105 ಟಿಎಂಸಿ ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯಕ್ಕೆ 75 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿನ ನೀರನ್ನು 40 ಟಿಎಂಸಿಗೆ ಇಳಿಸಿ ಗೇಟ್‌ ಅಳವಡಿಸಲು ಟಿಬಿ ಬೋರ್ಡ್‌ ಅಧಿಕಾರಿಗಳು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ಬೇಸಿಗೆ ಮುಕ್ತಾಯದ ವೇಳೆಗೆ ಎಲ್ಲಾ ಗೇಟ್‌ ಅಳವಡಿಸುತ್ತೇವೆ ಎಂದು ಡ್ಯಾಂನ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Tags:
error: Content is protected !!