ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.
ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ ಟಿಬಿ ಬೋರ್ಡ್ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ, ಸಿಇಓ, ರೈತರ ಸಮ್ಮುಖದಲ್ಲಿ ಡ್ಯಾಂಗೆ ಯಾವುದೇ ತೊಂದರೆಯಾಗದಂತೆ ಗೇಟ್ ಅಳವಡಿಕೆಯಾಗಲಿ ಎಂದು ಗುರುರಾಜ ಆಚಾರ್ಯ, ವಾದಿರಾಜ ಆಚಾರ್ಯರ ನೇತೃತ್ವದಲಲಿ ಮಹಾ ಸುದರ್ಶನ ಹೋಮ ಹಾಗೂ ರಕ್ಷಾ ಹೋಮದ ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು.
ಇದನ್ನು ಓದಿ: ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆಗೆ ಚಾಲನೆ
ಪೂಜೆಯ ಬಳಿಕ ಆರಂಭದಲ್ಲಿ ಗ್ಯಾಸ್ ಕಟ್ಟರ್ ಮೂಲಕ ಕ್ರಸ್ಟ್ ಗೇಟ್ ಕಟ್ಟಿಂಗ್ ಮಾಡಿ ಮೇಲೆತ್ತಲು ಚಾಲನೆ ನೀಡಲಾಯಿತು.
105 ಟಿಎಂಸಿ ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯಕ್ಕೆ 75 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿನ ನೀರನ್ನು 40 ಟಿಎಂಸಿಗೆ ಇಳಿಸಿ ಗೇಟ್ ಅಳವಡಿಸಲು ಟಿಬಿ ಬೋರ್ಡ್ ಅಧಿಕಾರಿಗಳು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ಬೇಸಿಗೆ ಮುಕ್ತಾಯದ ವೇಳೆಗೆ ಎಲ್ಲಾ ಗೇಟ್ ಅಳವಡಿಸುತ್ತೇವೆ ಎಂದು ಡ್ಯಾಂನ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…