ಬೆಂಗಳೂರು: ಬಣ್ಣದ ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ ಕೂಡ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆಯಾಗಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿಯನ್ನು ಬ್ಯಾನ್ ಮಾಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ. ಇತೀಚೆಗೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಸೇರಿದಂತೆ ನಾನ್‌ವೆಜ್ ಪ್ರಿಯರ ಕಬಾಬ್ ಮತ್ತು ಹೆಣ್ಣುಮಕ್ಕಳ ಹಾಟ್ ಫೆವರೇಟ್ ಪಾನಿಪುರಿ ಬ್ಯಾನ್ ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ ಟೀಗೆ ಕುತ್ತು ಬಂದಿದ್ದು, ಚಹಾ ಪ್ರಿಯರಿಗೆ ಬಿಗ್ ಶಾಕ್ ಆಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಟೀ ಪುಡಿ ಮಾದರಿ ಸಂಗ್ರಹಿಸಲಾಗಿತ್ತು. ಬೆಂಗಳೂರಿನಲ್ಲಿ ಸಂಗ್ರಹಿಸಿದ್ದ ೪೯ ಟೀ ಪುಡಿ ಸ್ಯಾಂಪಲ್ಸ್ ಪೈಕಿ ೪೫ ಟೀ ಪುಡಿ ಸ್ಯಾಂಪಲ್ಸ್ ಅಸುರಕ್ಷಿತವಾಗಿರುವುದು ಕಂಡು ಬಂದಿದೆ. ಪರಿಶೀಲನೆ ವೇಳೆ ಟೀ ಪೌಡರ್ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಪ್ರಮುಖವಾಗಿ ಚಹಾದ ಪೌಡರ್ ಕಲರ್ ಹೆಚ್ಚಿಸಲು ಟೀ ಬಣ್ಣ ಬರಲು ಕೆಮಿಕಲ್ ಬಣ್ಣಗಳ ಬಳಕೆ ಮಾಡಲಾಗುತ್ತಿದೆ ಎಂಬ ಭಯಾನಕ ಅಂಶ ಪತ್ತೆ ಆಗಿದೆ.
ರಸ್ತೆ ಬದಿಯ ಕೆಲವು ಚಹಾದ ಅಂಗಡಿಗಳಲ್ಲಿ ತೂಕ ಹೆಚ್ಚಿಸಲು ಟೀ ಪುಡಿಯಲ್ಲಿ ಕೆಲವು ಮರದ ಪುಡಿ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದರಲ್ಲಿಯೂ ಕೂಡ ಕ್ಯಾನ್ಸರ್‌ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಟೀ ಪುಡಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳನ್ನು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧಾರ ಮಾಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…