Mysore
32
few clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ: ತಪ್ಪಿದ ಭಾರೀ ಅನಾಹುತ

ಕೋಲಾರ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೋಲಾರದಲ್ಲಿ ತುರ್ತು ಭೂಸ್ಪರ್ಶವಾಗಿದೆ.

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡೂರು ಕರಪನಹಳ್ಳುಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಹೆಲಿಕಾಪ್ಟರ್‌ನಲ್ಲಿ ಮೂವರು ವಾಯುಸೇನೆಯ ಪೈಲಟ್‌ಗಳು ತರಬೇತಿ ಪಡೆಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ಓರ್ವ ಮಹಿಳಾ ಪೈಲಟ್‌ ಸೇರಿದಂತೆ ಮೂವರು ಸೇಫ್‌ ಆಗಿದ್ದಾರೆ.

ಯಲಹಂಕ ತಂತ್ರಜ್ಞರ ತಂಡ ತೆರಳಿ ತಾಂತ್ರಿಕ ದೋಷ ಸರಿಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ವಾಪಸ್‌ ಆಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

 

 

Tags:
error: Content is protected !!