ಕೋಲಾರ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೋಲಾರದಲ್ಲಿ ತುರ್ತು ಭೂಸ್ಪರ್ಶವಾಗಿದೆ.
ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡೂರು ಕರಪನಹಳ್ಳುಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಹೆಲಿಕಾಪ್ಟರ್‌ನಲ್ಲಿ ಮೂವರು ವಾಯುಸೇನೆಯ ಪೈಲಟ್‌ಗಳು ತರಬೇತಿ ಪಡೆಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ಓರ್ವ ಮಹಿಳಾ ಪೈಲಟ್ ಸೇರಿದಂತೆ ಮೂವರು ಸೇಫ್ ಆಗಿದ್ದಾರೆ.
ಯಲಹಂಕ ತಂತ್ರಜ್ಞರ ತಂಡ ತೆರಳಿ ತಾಂತ್ರಿಕ ದೋಷ ಸರಿಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಳಿಕ ಅಲ್ಲಿಂದ ಹೆಲಿಕಾಪ್ಟರ್ ವಾಪಸ್ ಆಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು…
ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…