Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ತೇಜಸ್ವಿ ಸೂರ್ಯ ರಿಸೆಪ್ಷನ್‌: ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ನವದಂಪತಿಗೆ ಶುಭಹಾರೈಕೆ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ನವದಂಪತಿಗೆ ಸಿಎಂ, ಡಿಸಿಎಂ ಸೇರಿದಂತೆ ಅನೇಕ ಗಣ್ಯರು ಶುಭಹಾರೈಸಿದ್ದಾರೆ.

ಇಂದು ನಗರದ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ಮುಖಂಡರು, ಆಪ್ತರು ಆಗಮಿಸಿ ಜೋಡಿಗೆ ಆಶೀರ್ವಾದಿಸಿದ್ದಾರೆ.

ಮಾರ್ಚ್‌ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು.

Tags:
error: Content is protected !!