ರಾಜ್ಯ

ಟೆಲಿಪ್ರಾಂಪ್ಟರ್‌ ಮೋದಿ: ಕುಹಕವಾಡಿದ ಕಾಂಗ್ರೆಸ್‌

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್‌ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್‌  ವ್ಯಂಗವಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪ್ರಧಾನಿ ಅವರ  ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವೀಡಿಯೊವನ್ನು ಹಂಚಿಕೊಂಡಿರುವ ಕಾಂಗ್ರೆಸ್‌,  ವಿದೇಶಿ ಭಾಷಣ ಅಥವಾ ದೇಶಿಯ ಸಾರ್ವಜನಿಕ ಭಾಷಣಗಳಲ್ಲಿ ಮೋದಿ ಅವರಿಗೆ ಟೆಲಿಪ್ರಾಂಪ್ಟರ್‌ ಇಲ್ಲದೆ ಒಂದು ಶಬ್ದವು ಬರುವುದಿಲ್ಲ ಎಂದು ಕುಹಕವಾಡಿದೆ.

ದೆಹಲಿಯ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಟೆಲಿಪ್ರಾಂಪ್ಟರ್‌ ಕೈ ಕೊಟ್ಟಾಗ ಮೋದಿ ಸ್ವಲ್ಪ ಸಮಯ ಮಾತನಾಡದೇ ಸುಮ್ಮನೇ ಇದ್ದರು. ಆ ಸಮಯದ ಮೌನವ್ರತ ವಹಿಸಿದ್ದರು. ಯಾಕೆಂದರೆ ಅವರ ಒಳಗಡೆ ಏನು ಇಲ್ಲ  ಎಂದು ರಾಜ್ಯ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ: ಶಾಸಕ ರವಿಕುಮಾರ್‌

ಮಂಡ್ಯ: ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಹವಾನಿಯಂತ್ರಣ ಯಂತ್ರ ಒಳಗೊಂಡಂತೆ ಲೇಡಿಸ್‌ ಲಾಂಜ್‌ ನಿರ್ಮಾಣ ಮಾಡಲು…

10 mins ago

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…

2 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…

2 hours ago

ಏಪ್ರಿಲ್.‌9ರಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…

3 hours ago

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

4 hours ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

4 hours ago