ರಾಜ್ಯ

ಕರ್ನಾಟಕದಲ್ಲಿ ತಾಪಮಾನ ಕುಸಿತ: ಮುಂದಿನ ಮೂರು ದಿನಗಳಲ್ಲಿ ಶೀತಗಾಳಿಯ ಎಚ್ಚರಿಕೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಳಿಗಾಲ ಪ್ರಾರಂಭವಾಗಿದ್ದು, ಮುಂದಿನ ಮೂರು ದಿನಗಳು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮತ್ತೊಮ್ಮೆ ತಾಪಮಾನದಲ್ಲಿ ಕುಸಿತ ಕಂಡಿದೆ.

ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕಡಿಮೆ ತಾಪಮಾನ ಕುಸಿತ ಕಂಡಿದೆ. ಅಲ್ಲದೇ ಮುಂದಿನ ಮೂರು ದಿನಗಳಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಆದರೆ ಈಗ ರಾಜ್ಯದಲ್ಲಿ ಕನಿಷ್ಠ ಉಷ್ಠಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ ಇಳಿಕೆಯಾಗುವ ಸಾಧ್ಯತೆ ಇದೆ. ಜೊತೆಗೆ ರಾಜ್ಯಾದ್ಯಂತ ಅಧಿಕವಾಗಿ ಮಂಜು ಆವರಿಸಿಕೊಂಡು ಮುಸುಕಿನ ವಾತಾವರಣ ಮುಂದುವರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೇ ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳಲ್ಲಿಯೂ ಶೀತಗಾಳಿಯ ವಾತವರಣ ಇರಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯಿಂದ ತಿಳಿಸಿದೆ.

 

ಅರ್ಚನ ಎಸ್‌ ಎಸ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago