ರಾಜ್ಯ

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ.

ಹಲವೆಡೆ ಹೀಟ್‌ ಸ್ಟ್ರೋಕ್‌ ಭೀತಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಕೂಡ ಇದೇ ವಾತಾವರಣ ಮುಂದುವರಿಯಲಿದೆ.

ಬಿಸಿಲು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್‌ ಆಗಿದ್ದು, ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

14 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

1 hour ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

20 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

20 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

21 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

21 hours ago