Mysore
31
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ತಂಪಾಗಿರಬೇಕಾದ ವಾತಾವರಣ ಇದೀಗ ಬಿಸಿಲಿನಿಂದ ಕಂಗಾಲಾಗುವಂತಾಗಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಎಲ್ ನಿನೋ ಎಫೆಕ್ಟ್‌ನಿಂದ ಮಳೆ ಅಭಾವ ಉಂಟಾಗಿರುವುದು ತಾಪಮಾನ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಲಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗಲಿನ ವೇಳೆ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಬಿಸಿಲಿನ ವಾತಾವರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಬೆಳಗ್ಗೆ ಮತ್ತು ಸಂಜೆ ವೇಳೆ ವಾತಾವರಣದಲ್ಲಿ ಸ್ವಲ್ಪ ತಂಪು ಕಂಡುಬಂದರೂ, ಮಧ್ಯಾಹ್ನದ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ.

ಮುಂದಿನ ದಿನಗಳಲ್ಲಿಯೂ ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿಯ ಬಿಸಿ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೂ, ವ್ಯಾಪಕ ಮಳೆಯ ನಿರೀಕ್ಷೆ ಕಡಿಮೆಯಾಗಿದೆ.

ಮಳೆಗಾಲದಲ್ಲೇ ಬೇಸಿಗೆಯಂತಹ ವಾತಾವರಣ ಕಂಡುಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ನೀರು ಸೇವಿಸುವುದು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತವಾಗಿದೆ.

Tags:
error: Content is protected !!