ಬೆಂಗಳೂರು: ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ನೀಡಿದ್ದು, ಉದ್ಯಮಿಗಳ ಒತ್ತಡಕ್ಕೆ ಮಣಿಯಿತಾ ಎಂಬ ಪ್ರಶ್ನೆ ಉದ್ಬವವಾಗಿದೆ.
ಕನ್ನಡಿಗರ ಉದ್ಯೋಗ ಮೀಸಲಾತಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಸಂಪುಟ ಅನುಮೋದನ್ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಇನ್ನೂ ಕನ್ನಡಿಗರಿಗಡ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈಕಿರಣ್ ಮಜುಂದಾರ್ ಅವರು ಆಕ್ಷೇಪ ಎತ್ತಿದ್ದರು.
ಈ ಹಿನ್ನೆಲೆಯಲ್ಲಿ ಉದ್ಯಮಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿಯಿತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.