ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಬಳಿಕ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.





