ಬೆಂಗಳೂರು : ಬಿಎಂಟಿಸಿ , ಕೆಎಸ್ ಆರ್ ಟಿಸಿ ಬಸ್ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ ಸಾರಿಗೆ ಸಚಿವರು ಕೋರ್ಟ್ ಕಚೇರಿಗೆ ಅಲೆದಾಡುವುದನ್ನ ತಪ್ಪಿಸಲು ಮುಂದಾಗಿದ್ದಾರೆ.
ಕೆ.ಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದವರಿಗೆ ಇನ್ನು ಮುಂದೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಇತ್ತ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ಕಂಡಕ್ಟರ್ ಗಳು ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ.
ಈ ಹಿಂದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದ ವಾಹನ ಸವಾರರು, ಪಾದಚಾರಿಗಳಿಗೆ ಕೇವಲ ೨೫ ಸಾವಿರ ರೂಪಾಯಿ ಪರಿಹಾರ ನೀಡಲಾಗ್ತಿತ್ತು. ಇಂದಿನಿಂದ ಹತ್ತು ಲಕ್ಷ ಪರಿಹಾರ ನೀಡಲಾಗುತ್ತದೆ. ಅಲ್ಲದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸದ ಅವಘಡ, ಬಸ್ ಆಕ್ಸಿಡೆಂಟ್ ನಿಂದ ಮೃತಪಡುವ ಪ್ರಯಾಣಿಕರಿಗೂ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ಈ ಹಿಂದೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ,ಕಂಡಕ್ಟರ್ ಗಳು ಆಕ್ಸಿಡೆಂಟ್ ಆಗಿ ತೀರಿಕೊಂಡರೆ ಕೇವಲ ೩ ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಈಗ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…