ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ನುಚ್ಚು ನೂರಾಗಿದ್ದು, ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಗಾಯಾಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.