Mysore
28
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಬೆಂಗಳೂರು ಮೂಲದ ಮೀಸಲು ಪಡೆ ಪೊಲೀಸ್ ಅಧಿಕಾರಿಗಳು. ಅಪಘಾತದಲ್ಲಿ ಮಡಿದವರನ್ನು ಮಂಜುನಾಥ್ (೩೨), ಅಮರೇಶ್ ಹಾಗೂ ಸಚ್ಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಮಹಾಂತೇಶ್, ಈಶ್ವರ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಈ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಮೂರು ಜನ ಅಧಿಕಾರಿಗಳು ಮೃತಪಟ್ಟಿದ್ದು, ಮಹಾಂತೇಶ್ ಹಾಗೂ ಈಶ್ವರ್ ಎಂಬುವರು ಗಾಯಗೊಂಡಿದ್ದಾರೆ. ಬೆಂಗಳೂರಿಂದ ಬಳ್ಳಾರಿಗೆ ಮದುವೆಗೆ ಹೋಗುವಾಗ ಘಟನೆ ನಡೆದಿದ್ದು, ಐದು ಜನ ಪೊಲೀಸರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಘಟನೆ ಸಂಬಂಧ ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಎಸ್ಪಿ ರಂಜಿತಕುಮಾರ ಬಂಡಾರು ಮಾಹಿತಿ ನೀಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ
ಹೆಗ್ಗೆರೆ ಗೇಟ್ ಬಳಿ ಭೀಕರ ಅಪಘಾತ ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ, ಭೀಕರ ಅಪಘಾತದ ಮಾಹಿತಿ ಪಡೆದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಘಟನೆಯಲ್ಲಿ ಮೂರು ಮಂದಿ ಪ್ರೊಬೇಷನರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ಸ್ನೇಹಿತನ ಮದುವೆಗೆ ಬಳ್ಳಾರಿಗೆ ತೆರಳುವಾಗ ಅಪಘಾತವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಕಾರು ತುಂಬಾ ವೇಗದಲ್ಲಿ ಚಲಿಸುತ್ತಿತ್ತು ಎನ್ನಲಾಗಿದೆ. ಇದರಲ್ಲಿ ಯಾರದ್ದು ತಪ್ಪು ಅಂತ ಹೇಳೋದು ಕಷ್ಟ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.

ಸರ್ಕಾರ ಏನೆಲ್ಲಾ ನೆರವು ನೀಡಬೇಕು ಎಲ್ಲವನ್ನು ನೀಡುತ್ತದೆ. ರಜೆ ಮೇಲೆ ಮದುವೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಇದೆ. ಇದರಿಂದ ಯಾವ ಸಹಾಯ ಮಾಡ್ಬೇಕು ಸರ್ಕಾರ ಮಾಡುತ್ತದೆ. ಆನ್ ಡ್ಯೂಟಿ ಇಲ್ಲದ ಕಾರಣ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇವರೆಲ್ಲರೂ ಈಗಷ್ಠೆ ಟ್ರೈನಿಂಗ್ ಮುಗಿಸಿ ಡ್ಯೂಟಿಗೆ ಜಾಯಿನ್ ಆದವರು. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಏನ್ ಸಾಧ್ಯವಾಗುತ್ತೋ ಅದನ್ನ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.

ಆಸ್ಪತ್ರೆಗೆ ಭೇಟಿ;
ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ ಮಂಜುನಾಥ್, ಅಮರೀಶ್, ಸಚ್ಚಿನ್ ಮೃತ ದೇಹ ವೀಕ್ಷಣೆ ಮಾಡಿದರು. ಈ ವೇಳೆ ಗೃಹ ಸಚಿವರ ಮುಂದೆ ಮೃತನ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಕಣ್ಣಿರಿಟ್ಟರು. ಸಚಿವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘಮೂರ್ತಿ ಇದ್ದರು.‌

 

Tags:
error: Content is protected !!