ಮೈಸೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಿದೆ. ಅವರ ಮೇಲೆ ನಮಗೆ ಯಾವುದೇ ನಂಬಿಕೆಗಳಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಭಯೋತ್ಪಾದಕರ ಪರವಾಗಿದ್ದಾರೆ. ಅವರು ಹೇಳುವುದನ್ನು ಜನರು ಕೇಳಬೇಕು ಅಂತೇನೂ ಇಲ್ಲ. ಮೊದಲು ಅವರ ಬಾಯಿಗೆ ಬೀಗ ಹಾಕಬೇಕು. ಬಾಯಿಗೆ ಬಂದಂತೆ ಹೇಳಿಕೆಗಳನ್ನು ಉಪ ಮುಖ್ಯಮಂತ್ರಿಗಳು ನೀಡುತ್ತಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಅಸಮಾಧಾನ ಹೋರಹಾಕಿದ್ದಾರೆ.
ಬಳಿಕ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ, ಇದು ಭಯೋತ್ಪಾದಕರ ಕೃತ್ಯವಲ್ಲದೇ ಮತ್ತೇನು? ಹೋಟೆಲ್ ಯಾರೋ ಮಕ್ಕಳು ಪಟಾಕಿ ಅಥವಾ ಬಲೂನ್ ಹೊಡೆದಿಲ್ಲ. ಇದು ಬಾಂಬ್ ಸ್ಫೋಟವಾಗಿದ್ದು, ಇದರ ಹಿಂದೆ ಭಯೋತ್ಪಾದಕರ ಕೃತ್ಯವಿದೆ. ಈ ಕೃತ್ಯಕ್ಕೆ ಗುಪ್ತಚರ ಇಲಾಖೆಯ ವೈಫಲ್ಯವೂ ಕಾರಣವಾಗಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಒಪ್ಪಿಕೊಳ್ಳಲೇ ಬೇಕು. ಮತ್ತು ಭಯೋತ್ಪಾದಕರನ್ನು ಬೇಗ ಪತ್ತೆ ಮಾಡಿ ಶಿಕ್ಷೆ ನೀಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…