Mysore
26
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ ದಾಳಿ ಎಂದು ಶಂಕಿಸಲಾಗಿದೆ.

ಭಾರತದಲ್ಲಿಯೂ ಯಹೂದಿಗಳ ಕಚೇರಿ ಇರುವ ಹಿನ್ನೆಲೆ, ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಬೆಂಗಳೂರು ಸೇರಿದಂತೆ ಪ್ರಮುಖ ಮೆಟ್ರೋ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಸಂಜೆ 6.30ರ ಸುಮಾರಿಗೆ ಬಂದೂಕುಧಾರಿ ದುಷ್ಕರ್ಮಿಗಳು ಬಾಂಡಿ ಬೀಚ್‌ನಲ್ಲಿದ್ದ ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಯಹೂದಿಗಳು ಒಂದು ವಾರ ಆಚರಿಸುವ ಹನುಕ್ಕಾ ಹಬ್ಬದ ಮೊದಲ ದಿನವೇ ಈ ದುರ್ಘಟನೆ ನಡೆದಿದೆ.

ಇದನ್ನು ಓದಿ : ಭಯೋತ್ಪಾದನೆ ನಾಶಪಡಿಸಲು ದಿಟ್ಟ ಕ್ರಮ ಅನಿವಾರ್ಯ

ಭಾರತದಲ್ಲೂ ಯಹೂದಿಗಳ ಹಬ್ಬವಾದ ಹನುಕ್ಕಾ ಆಚರಿಸುವ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ದೇಶದಾದ್ಯಂತ ಎಚ್ಚರಿಕೆ ನೀಡಲಾಗಿದೆ. ಭಯೋತ್ಪಾದಕ ಸಂಘಟನೆಗಳು ದೆಹಲಿ, ಬೆಂಗಳೂರು ಮತ್ತು ಮುಂಬೈನಲ್ಲಿರುವ ಯಹೂದಿ ಸಂಸ್ಥೆಗಳು ಮತ್ತು ಕೇಂದ್ರಗಳ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಲು ಯೋಜಿಸಿವೆ ಎಂಬ ಗಂಭೀರ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಈ ಹಿನ್ನೆಲೆ, ಏರ್ಪೋರ್ಟ್‌ಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ. ಹನುಕ್ಕಾ ಹಬ್ಬ ಆರಂಭದ ದಿನ ಹಿನ್ನೆಲೆಸಿಡ್ನಿ ಬೀಚ್‌ನಲ್ಲಿದ್ದ ಸಾವಿರಾರು ಜನರು ಸೇರಿದ್ದರು. ಈ ವೇಳೆ ಸ್ಥಳಕ್ಕೆ ನುಗ್ಗಿದ್ದ ಬಂದೂಕುಧಾರಿ ಮನಬಂದಂತೆ ಗುಂಡು ಹಾರಿಸಲು ಶುರು ಮಾಡಿದ್ದ. ಸದ್ಯ ಒಬನನ್ನು ಹೊಡೆದುರುಳಿಸಲಾಗಿದ್ದು, ಇನ್ನೋರ್ವನನ್ನು ಬಂಧಿಸಲಾಗಿದೆ.

Tags:
error: Content is protected !!