ಬೆಂಗಳೂರು : ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡಲು ಕರ್ನಾಟಕ ಒಪ್ಪದ ಹಿನ್ನೆಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಜುಲೈ ೧೨ ರಿಂದ ೩೧ ರವರೆಗೆ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿತ್ತು. ಆದ್ರೆ ನಮ್ಮ ಕರ್ನಾಟಕ ಸರ್ಕಾರ ಇದನ್ನ ತಿರಸ್ಕರಿಸಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಿ ಪ್ರತಿ ದಿನ ೧ ಟಿಎಂಸಿ ನೀರು ಬಿಡೋದಿಕ್ಕೆ ಆಗಲ್ಲ ಎಂದು CWRC ಶಿಫಾರಸ್ಸು ಒಪ್ಪಲು ಸಾಧ್ಯವಿಲ್ಲ ಎಂದಿತು.
ಕರ್ನಾಟಕದ ನಿರ್ಧಾರದ ಬೆನ್ನಲ್ಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಜುಲೈ ೧೧ ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ೩ನೇ ಸಭೆ ನಡೆಸಿ ಜುಲೈ ೧೨ ರಂದು ಈ ತಿಂಗಳ ಕೊನೆಯವರೆಗೂ ಸುಮಾರು ೨೦ ದಿನ ಪ್ರತಿ ದಿನ ೧ ಟಿಎಂಸಿ ನೀರು ಬಿಡಲು ಆದೇಶಿಸಿತ್ತು. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ ೯.೪ ಟಿಎಂಸಿ , ಜುಲೈ ನಲ್ಲಿ ೩೧.೨೪ ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು ೪೦.೪೩ ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ ೫ ಟಿಎಂಸಿ ಗೂ ನೀರು ಬಿಡಲು ಸಾಧ್ಯವಾಗಿದೆ.
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…