ಮೈಸೂರು : ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಇಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಫೋಟೋ ಹಾಕಿ ಬರೆದಿರುವ ಸಾಲುಗಳು ಸದ್ಯ ಭಾರೀ ವೈರಲ್ ಆಗಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡದ್ದು ಗೊತ್ತೇ ಇದೆ. ಮೈಸೂರು, ಮಂಡ್ಯ ಕ್ಷೇತ್ರಗಳ ಟಿಕೆಟ್ ಗೆ ಜೆಡಿಎಸ್ ಆಕಾಂಕ್ಷಿಯಾಗಿದೆ ಎಂಬ ವದಂತಿ ಕೂಡ ಇದೆ.
ಸಂಸದ ಪ್ರತಾಪ್ ಸಿಂಹ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಳಗ್ಗೆ ಅವರ ಬಿಡದಿ ತೋಟದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಕುಮಾರಸ್ವಾಮಿಯನ್ನು ಭೇಟಿ ಮಾಡಿರುವ ಪ್ರತಾಪ್ ಸಿಂಹ, ಅವರ ಕಾಲಿಗೆ ನಮಸ್ಕರಿಸಿ ಕಷ್ಟಕಾಲದಲ್ಲಿ ಸತ್ಯ ಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ನಿಮಗೆ ಧನ್ಯವಾದ ಕುಮಾರಣ್ಣ ಎಂದು ಹೇಳಿದ್ದಲ್ಲದೆ ತಮ್ಮ ಭಾವನೆಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕೂಡ ಹಂಚಿಕೊಂಡಿದ್ದಾರೆ. ಇದೀಗ ರಾಜಕೀಯ ವಲಯದಲ್ಲಿ ಈ ಪೋಸ್ಟ್ ಭಾರೀ ಸದ್ದು ಮಾಡುತ್ತಿದೆ.