ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದು, ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಪ್ರತಿಕ್ರಿಯೆ ಕೊಡಲು ಆಗಲ್ಲ. ನಿರಂತರ ೧೫ ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದ್ರೂ ಮಾಡಿದ್ದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅಲ್ಲದೆ ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನ ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಮುಖಂಡೆ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿಟಿ ದೇವೇಗೌಡ, ಸಾರಾ ಮಹೇಶ್, ಎಸ್ ಟಿ ಸೋಮಶೇಕರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿರುವುದರಿಂದ ಯಾರು ಇದ್ದಾರೆ ಯಾರು ಇಲ್ಲ ಎಂಬುವುದನ್ನ ನಾನು ಹೇಳಲು ಸಾಧ್ಯವಿಲ್ಲ ಎಂದರು.
ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ಕ್ಷೇತ್ರದ ಪ್ರಚಾರ ವೇಳೆ ಚನ್ನಪಟ್ಟಣಕ್ಕೆ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಕೊಡುಗೆ…
ಮಡಿಕೇರಿ: ರಾತ್ರೋರಾತ್ರಿ ಈ ಭಾಗದ ಜನತೆಯ ಜಮೀನು ವಕ್ಫ್ ಆಸ್ತಿವೆಂದು ಸೃಷ್ಠಿಯಾಗುತ್ತಿದೆ. ಹೀಗಾಗಿ ನಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ…
ಬಳ್ಳಾರಿ: ತಾನು ಮುಖ್ಯಮಂತ್ರಿಯಾಗಿದ್ದ ವೇಳೆ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ರೂಪಿಸಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಗೆ ಹಣ ನೀಡಲಾಗದೇ ಆ ಯೋಜನೆಯನ್ನೂ…
ಮೈಸೂರಿನಿಂದ ಹೊರಡುವ ರೈಲುಗಳು ಕ್ರ.ಸಂ - ರೈಲು ಸಂಖ್ಯೆ - ರೈಲಿನ ಹೆಸರು - ಮೈಸೂರಿನಿಂದ ಎಲ್ಲಿಗೆ -…
ಮಡಿಕೇರಿ: ಕೇರಳದಿಂದ ಕೊಡಗು ಜಿಲ್ಲೆಗೆ ಅಸುರಕ್ಷಿತ ಆಹಾರ ಪದಾರ್ಥ ಸಾಗಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ಆಹಾರ ಇಲಾಖೆಯ ಅಧಿಕಾರಿಗಳು ಶನಿವಾರ…
ಕಲ್ಯಾಣ (ಶಿಗ್ಗಾವಿ): ಕಾಂಗ್ರೆಸ್ ಪಕ್ಷ ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ. ಜನ ಸಾಮಾನ್ಯರ ಅಭಿವೃದ್ಧಿಯೇ ಪಕ್ಷದ ಗುರಿ ಎಂದು…