ರಾಜ್ಯ

2019ರ ಆ ಒಂದು ಘಟನೆ ನನ್ನ ಇನ್ನು ಕಾಡುತ್ತಿದೆ: ವೇದಿಕೆ ಮೇಲೆ ಗಳಗಳನೆ ಅತ್ತ ನಿಖಿಲ್‌!

ರಾಮನಗರ: ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಕೂತುಹಲ ಮೂಡಿಸಿರುವ ಕ್ಷೇತ್ರಗಳೆಂದರೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಎನ್ನಬಹುದು. ಎರಡು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಇತ್ತ ಬೆಂಗಳೂರು ಲೋಕಸಭಾ ಕ್ಷೇತ್ರದ ರಾಮನಗರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ ನಿಖಿಲ್‌ ಕುಮಾರಸ್ವಾಮಿ 2019ರ ಲೋಕಸಭೆ ಚುನಾವಣೆಯಲ್ಲಿ ನಡೆದ ಕೆಲವು ಘಟನೆಗಳನ್ನು ನೆನೆಸಿಕೊಂಡು ವೇದಿಕೆಯಲ್ಲಿಯೇ ಗಳಗಳನೆ ಅತ್ತ ಘಟನೆ ನಡೆಯಿತು.

2019 ರಲ್ಲಿ ನನಗೆ ರಾಜಕಾರಣದ ಅನುಭವದ ಕೊರತೆ ಇತ್ತು, ಆವತ್ತಿನ ಕಾಂಗ್ರೆಸ್‌ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾದೆ, ಅದು ಇಂದಿಗೂ ನನ್ನನ್ನು ಕಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರಹಾಕಿದರು.

ನಾನು ಎರಡು ಬಾರಿ ಸೋತಿದ್ದೇನೆ, ನನ್ನ ಮಾವ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ ಅವರನ್ನು ಸೋಲಿಸಬೇಡಿ, ರಾಮನಗರದ ಜನ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಪರಿಪರಿಯಾಗಿ ಬೇಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

2 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

2 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

3 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

3 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

3 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

3 hours ago