ರಾಜ್ಯ

ಆ. 28ರಂದು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಇದೇ ಆಗಸ್ಟ್‌ 28ರ ಬುಧವಾರದಂದು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 ಸಾವಿರ ರೂ., ಹಾಗೂ ಪ್ರಶಂಸಾ ಪತ್ರ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ. ಮತ್ತು ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಬಹುಮಾನ ವಿತರಿಸಲಾಗುತ್ತದೆ.

ಪ್ರತಿ ಪ್ರೌಢಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳುಳ್ಳ ಒಂದು ತಂಡಕ್ಕೆ ಇದರಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಒಂದು ತಂಡದಲ್ಲಿ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ ಇರತಕ್ಕದ್ದು. ಬಾಲಕಿಯರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕಿಯರು ಮತ್ತು ಬಾಲಕರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕರು ಭಾಗವಹಿಸಲು ಅವಕಾಶವಿರುತ್ತದೆ. 8,9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧಿಗಳಿಗೆ ನಿಬಂಧನೆಗಳು:

– ಆಯ್ಕೆಯಾದ ಸ್ಪರ್ಧಿಗಳು ತಾವು ಓದುತ್ತಿರುವ ಶಾಲೆ ಹಾಗೂ ತರಗತಿಯ ಬಗ್ಗೆ ಪುರಾವೆ ನೀಡಬೇಕು.
– ಯಾವುದೇ ಸ್ಪರ್ಧಿಯ ವರ್ತನೆ / ಭಾಗವಹಿಸುವಿಕೆ ನಿಯಮ ಬಾಹಿರವೆಂದು ಕಂಡುಬಂದಲ್ಲಿ ಸ್ಪರ್ಧಿಯನ್ನು ಅನರ್ಹಗೊಳಿಸಲಾಗುವುದು.
– ಅರ್ಹತೆ, ಸ್ಪರ್ಧಿಯ ದೃಢೀಕರಣ ಮತ್ತು ಇತರ ನಿರ್ಧಾರಗಳ ಹಕ್ಕನ್ನು ಜವಾಹರಲಾಲ್‌ ನೆಹರು ತಾರಾಲಯ, ಬೆಂಗಳೂರು ಹೊಂದಿರುತ್ತದೆ.
– ಸೂಕ್ತ ಸಂದರ್ಭಗಳಲ್ಲಿ ಎಲ್ಲಾ ಹಂತಗಳಲ್ಲೂ ಪರೀಕ್ಷೆಯಲ್ಲಿ ಬದಲಾವಣೆ ಮಾಡುವ ಹಕ್ಕು ಜವಾಹರಲಾಲ್ ನೆಹರು ತಾರಾಲಯ ಹೊಂದಿರುತ್ತದೆ.
– ಯಾವುದೇ ಸಂದರ್ಭದಲ್ಲಿ ಸ್ಪರ್ಧೆಯ ಆಯೋಜಕರಾದ ಜವಾಹರಲಾಲ್ ನೆಹರು ತಾರಾಲಯದ ತೀರ್ಪು ಅಂತಿಮವಾಗಿರುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

10 mins ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

34 mins ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

39 mins ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

45 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

1 hour ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

1 hour ago