Thawar Chand Gehlot letter
ಬೆಂಗಳೂರು: 18 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಧಾನಸಭೆಯ 18 ಬಿಜೆಪಿ ಸದಸ್ಯರ (ಶಾಸಕರು) ಅಮಾನತು ರದ್ದುಗೊಳಿಸುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಸ್ಪೀಕರ್‌ಗೆ ಬರೆದ ಪ್ರತ್ಯೇಕ ಪತ್ರಗಳಲ್ಲಿ, ರಾಜ್ಯದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಮೂಲ ತತ್ವಗಳನ್ನು ಎತ್ತಿಹಿಡಿಯಲು ಮತ್ತು ಅಮಾನತುಗೊಂಡ ಶಾಸಕರು ಮತ್ತೆ ಜನ ಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಅನುವು ಮಾಡಿಕೊಡುವಂತಹ ನಿರ್ಧಾರ ತೆಗೆದುಕೊಳ್ಳಬೇಕೆಂಬ “ಆಸೆ”ಯನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರನ್ನು ಭೇಟಿಯಾಗಿ ಶಾಸಕರ ಅಮಾನತು ಸಂಬಂಧ ಸೋಮವಾರ ದೂರು ನೀಡಿದ್ದರು. ಅಮಾನತು ತೆರವುಗೊಳಿಸಿ ಶಾಸಕರಿಗೆ ತಮ್ಮ ಅಧಿಕಾರ ಚಲಾಯಿಸಲು ಅನುವು ಮಾಡಿಕೊಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತ್ತು. ಇದೀಗ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್‍ಗೆ ಪತ್ರ ಬರೆದು, 18 ಬಿಜೆಪಿ ಶಾಸಕರ ಅಮಾನತು ತೆರವುಗೊಳಿಸುವಂತೆ ಸಲಹೆ ನೀಡಿದ್ದಾರೆ.
ಉಭಯ ಸದನದ ಬಿಜೆಪಿ ವಿಪಕ್ಷ ನಾಯಕರು ನನ್ನನ್ನು ಭೇಟಿಯಾಗಿ 18 ಬಿಜೆಪಿ ಶಾಸಕರ ಅಮಾನತು ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ. 18 ಶಾಸಕರ ಅಮಾನತು ಆದೇಶವನ್ನು ಮರುಪರಿಗಣಿಸುವ ಅವರ ಕೋರಿಕೆಯನ್ನು ಸ್ಪೀಕರ್ ಹಾಗೂ ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ಹಾಗೂ ಜನಪ್ರತಿನಿಧಿಯಾಗಿ ಅಮಾನತುಗೊಂಡ ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪುನರಾರಂಭಿಸಲು ಅನುವು ಮಾಡಿಕೊಡಲು ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, 18 ಸದಸ್ಯರ ಅಮಾನತು ಆದೇಶ ರದ್ದತಿಗೆ ಅಗತ್ಯ ಕ್ರಮ ಕೈಗೊಳ್ಳಲು ಬಯಸುತ್ತೇನೆ. ಈ ಸಂಬಂಧ ಕೈಗೊಳ್ಳಲಾದ ಕ್ರಮವನ್ನು ನನ್ನ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ.
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…