ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಜೂನ್.6) ರಂದು ಸಚಿವ ನಾಗೇಂದ್ರ ನೀಡಿದ್ದ ರಾಜೀನಾಮೆಯನ್ನು ಇಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಪ್ರಕರಣಕ್ಕೆ ಈಗಾಗಲೇ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ವಾಲ್ಮೀಕಿ ನಿಗಮದ ಹಗರಣಕ್ಕೆ ಸಚಿವರ ತಲೆದಂಡವಾಗಿದ್ದು, ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕು ಮೊದಲು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.