ಚಿಕ್ಕೋಡಿ: ಬಾಗಲಕೋಟೆ ಜಿಲ್ಲೆಯ ಜೀವನಾಡಿಯಂತಿರುವ ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್ ಗೇಟ್ 22 ತಾಂತ್ರಿಕ ದೋಷದಿಂದಾಗಿ ಮುರಿದುಬಿದ್ದಿದ್ದು, ಭಾರೀ ಪ್ರಮಾಣದ ನೀರು ನದಿಗೆ ಪೋಲಾಗುತ್ತಿದೆ.
ಬ್ಯಾರೇಜ್‌ನಿಂದ ನೀರು ಆಲಮಟ್ಟಿ ಅಣೆಕಟ್ಟೆಯ ಹಿನ್ನೀರಿಗೆ ಕೃಷ್ಣಾ ನದಿ ಮುಖಾಂತರ ಅತಿಯಾದ ವೇಗದಲ್ಲಿ ಹರಿಯುತ್ತಿದ್ದು, ಸಾವಿರಾರು ಕ್ಯೂಸೆಕ್ಸ್ ನೀರು ಪೋಲಾಗುವ ಆತಂಕ ಎದುರಾಗಿದೆ.
ನೀರು ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದು ಎಂದು ನದಿ ತೀರದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಿಂದ ಕಾರ್ಮಿಕರನ್ನು ಕರೆಸಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಮುಳುಗು ತಜ್ಞರ ಜೊತೆಯಾಗಿ ಕಾರ್ಯಾಚರಣೆ ನಡೆಯುತ್ತಿದೆ.





