ರಾಜ್ಯ

ಬಾಗಲಕೋಟೆ| ಮುರಿದು ಬಿದ್ದ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್‌: ಭಾರೀ ಪ್ರಮಾಣದ ನೀರು ಪೋಲು

ಚಿಕ್ಕೋಡಿ: ಬಾಗಲಕೋಟೆ ಜಿಲ್ಲೆಯ ಜೀವನಾಡಿಯಂತಿರುವ ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್‌ ಗೇಟ್‌ 22 ತಾಂತ್ರಿಕ ದೋಷದಿಂದಾಗಿ ಮುರಿದುಬಿದ್ದಿದ್ದು, ಭಾರೀ ಪ್ರಮಾಣದ ನೀರು ನದಿಗೆ ಪೋಲಾಗುತ್ತಿದೆ.

ಬ್ಯಾರೇಜ್‌ನಿಂದ ನೀರು ಆಲಮಟ್ಟಿ ಅಣೆಕಟ್ಟೆಯ ಹಿನ್ನೀರಿಗೆ ಕೃಷ್ಣಾ ನದಿ ಮುಖಾಂತರ ಅತಿಯಾದ ವೇಗದಲ್ಲಿ ಹರಿಯುತ್ತಿದ್ದು, ಸಾವಿರಾರು ಕ್ಯೂಸೆಕ್ಸ್‌ ನೀರು ಪೋಲಾಗುವ ಆತಂಕ ಎದುರಾಗಿದೆ.

ನೀರು ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಬಹುದು ಎಂದು ನದಿ ತೀರದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಿಂದ ಕಾರ್ಮಿಕರನ್ನು ಕರೆಸಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಮುಳುಗು ತಜ್ಞರ ಜೊತೆಯಾಗಿ ಕಾರ್ಯಾಚರಣೆ ನಡೆಯುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೇಸಿ ಎಣ್ಣೆ ಮೇಳಕ್ಕೆ ವಿದ್ಯುಕ್ತ ಚಾಲನೆ ; ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಮೈಸೂರು : ಸಹಜ ಸಮೃದ್ಧ ಸಂಸ್ಥೆ ಹಾಗೂ ದೇಸಿರಿ ನ್ಯಾಚುರಲ್ಸ್ ಸಹಯೋಗದಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿರುವ ಮೂರು ದಿನಗಳ…

2 mins ago

ಐತಿಹಾಸಿಕ ಕ್ಷಣ | ಆಸ್ಕರ್‌ ರೇಸ್‌ನಲ್ಲಿ ಕಾಂತಾರ ಚಾಪ್ಟರ್‌-1

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಚಿತ್ರವು…

20 mins ago

ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ನಾಗೇಂದ್ರಗೆ ಸಿಬಿಐ ನೋಟಿಸ್‌

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ…

27 mins ago

ದಳಪತಿ ವಿಜಯ್‌ಗೆ ಬಿಗ್‌ ರಿಲೀಫ್‌ : ಜನನಾಯಗನ್‌ ಚಿತ್ರಕ್ಕೆ U/A ಸರ್ಟಿಫಿಕೇಟ್‌ ನೀಡುವಂತೆ ಹೈಕೋರ್ಟ್‌ ಆದೇಶ

ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್‍ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ…

53 mins ago

ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್ ; ನಿಲ್ಲದ ʻರಾಯʼನ ಅಬ್ಬರ

ಬೆಂಗಳೂರು : ರಾಕಿ ಬಾಯ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ 24 ಗಂಟೆಯಲ್ಲಿ ಬರೋಬ್ಬರಿ 200 ಮಿಲಿಯನ್ ಅಂದರೆ 20…

1 hour ago

ಬಳ್ಳೂರುಹುಂಡಿಯಲ್ಲಿ ಕಾಡಾನೆಗಳ ಹಾವಳಿ : ಸಲಗಗಳ ಕಾಟಕ್ಕೆ ಬೇಸತ್ತ ಜನ

ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ…

3 hours ago