Mysore
27
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ: ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಮುಂದುವರಿದಿದ್ದು, ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಒಟ್ಟಿಗೆ ಇದ್ದಾರೆ, ಬಿಟ್ಟಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ ನಡೆದಿದೆ. ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!