ರಾಜ್ಯ

ಬ್ರಾಂಡ್ ಬೆಂಗಳೂರನ್ನು ದೇಶದಲ್ಲೇ ನಂಬರ್ ಒನ್ ಆಗಿಸಬೇಕಿದೆ: ಸಿಎಂ

ಬೆಂಗಳೂರು : ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ. ರಾಜ್ಯದಲ್ಲಿ ಶೇ38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರಿಗೂ ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023” 17 ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅನುದಾನವನ್ನು ಒದಗಿಸುತ್ತಿದೆ. ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾಗವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ಎಂದರು.

ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದು ವಿವರಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ ಎಂಎಲ್ಸಿ ಎಸ್‌ ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘ‌ರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನ‌ರ್ ಜಯರಾಮ್ ಮತ್ತಿತರರು ಹಾಜರಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago