ರಾಜ್ಯ

ಚಾರ್ಚ್‌ಶೀಟ್‌ನಲ್ಲಿ ʻಡಿ ಗ್ಯಾಂಗ್‌ ʼನ ಅಮಾನುಷ ಕೃತ್ಯ ಬಯಲು…

ಬೆಂಗಳೂರು: ಚಿತ್ರದುರ್ಗ ಮೂಲದ  ರೇಣುಕಸ್ವಾಮಿಗೆ ನಟ ದರ್ಶನ್‌,  ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗೊಂಡು ಅಂಗಾತ ಮಲಗಿರುವ ಫೋಟೊಗಳು ಲಭ್ಯವಾಗಿವೆ. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷ್ಯಗಳು ಸಿಕ್ಕಿದಂತೆ ಆಗಿದೆ.

ಪಟ್ಟಣಗೆರೆ ಶೆಡ್​ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೊ ಇದಾಗಿದೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಇನ್ನ ಮುಂದೆ ಪವಿತ್ರಾಗೆ ಸಂದೇಶ ಕಳುಹಿಸುವುದಿಲ್ಲ.‌ ತಪ್ಪಾಯಿತು ಬಿಡಿ ಎಂದು ಪರಿಪರಿಯಾಗಿ ಕ್ಷಮೆ ಕೋರಿದ್ದರೂ ಆರೋಪಿಗಳ ಮನಸ್ಸು ಕರಗಿರಲಿಲ್ಲ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು ಎಂದು ಗೊತ್ತಾಗಿದೆ. ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕೃತ್ಯದ ವೇಳೆ ಪವಿತ್ರಾಗೌಡ ವ್ಯವಸ್ಥಾಪಕ ಕೆ. ಪವನ್ ಫೋಟೊ ತೆಗೆದು ಅದನ್ನು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಮಾಲೀಕ ವಿನಯ್ ಹಾಗೂ ದರ್ಶನ್ ಆಪ್ತ‌, ಸಾಫ್ಟ್‌ವೇರ್ ಎಂಜಿನಿಯರ್ ಪ್ರದೂಷ್ ಅವರ ಐಫೋ‌ನ್‌ಗೆ ಕಳುಹಿಸಿದ್ದರು. ರೇಣುಕಸ್ವಾಮಿ ಮೃತಪಟ್ಟ ನಂತರ ಫೋಟೊ ಡಿಲೀಟ್ ಮಾಡಿ ಸಾಕ್ಷ್ಯ ನಾಶ ಪಡಿಸಿದ್ದರು. ದತ್ತಾಂಶ ಮರು ಸಂಗ್ರಹದ ವೇಳೆ ಆ ಫೋಟೊ ಲಭ್ಯ ಆಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago