ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.
ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ ವೇಳೆ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ರಾಜಾರೋಷವಾಗಿ ಸಿಎಂ, ಡಿಸಿಎಂ ರನನ್ನು ಭೇಟಿ ಮಾಡಿದರೆ ಅದನ್ನೇ ದೊಡ್ಡದು ಮಾಡುತ್ತಾರೆ ಎಂದು ದೂರಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಪುಕ್ಸಟ್ಟೆ ಬಿದ್ದಿಲ್ಲ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಜನತೆ ಗೋ ಬ್ಯಾಕ್ ಗೋ ಬ್ಯಾಕ್ ಎಂದು ಹೇಳಿ ತಿರಸ್ಕಾರ ಮಾಡಿದವರನ್ನು ಇಲ್ಲಿ ಅಭ್ಯರ್ಥಿಯಾಗಿ ಮಾಡುತ್ತಾರೆ ಅದನ್ನು ಒಪ್ಪಬೇಕೇ ಎಂದು ಪ್ರಶ್ನಿಸಿದರು.
ರಾಜ್ಯಸಭೆಯಲ್ಲಿ ಅಡ್ಡ ಮತದಾನದ ವಿಚಾರವನ್ನು ದೊಡ್ಡದು ಮಾಡಿ ಬೀದಿಯಲ್ಲಿ ಪ್ರತಿಭಟನೆ ನಡೆಸಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಮಾಡಿದವರೊಂದಿಗೆ ನಾನು ಹೇಗೆ ಹೋಗಲಿ ಎಂದರು. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ನಾನು ಮಾಡಿದ ಬಹುದೊಡ್ಡ ತಪ್ಪು ಎಂದು ಇಂದು ಅನಿಸುತ್ತಿದೆ ಎಂದು ಹೇಳಿದರು.
ಕ್ಷೇತ್ರದ ಜನತೆಗಾಗಿ ಹಾಗೂ ಅಭಿವೃದ್ಧಿಗಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದರು, ಯಶವಂತಪುರ ಕ್ಷೇತ್ರದಲ್ಲಿ ಆರು ಬಾರಿ ಚುನಾವಣೆಗೆ ನಿಂತಿದ್ದೇನೆ ನಾಲ್ಕು ಬಾರಿ ಗೆದ್ದಿದ್ದೇನೆ ಎರಡು ಬಾರಿ ಸೋತಿದ್ದೇನೆ, ಮಸಲತ್ತು ಮಾಡಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದವರೊಂದಿಗೆ ಹೆಜ್ಜೆ ಹಾಕಿ ಗಂಡಸತನದ ಬಗ್ಗೆ ಮಾತನಾಡುತ್ತಿರುವ ಜೆಡಿಎಸ್ ಜವರಾಯಿ ಗೌಡರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…