ಬೆಂಗಳೂರು: ವೇಗವಾಗಿ ಹೋಗುವಾದ ಬೈಕ್ ಸ್ಕಿಡ್ ಆಗಿ ಬಿದ್ದು ಓರ್ವ ಸವಾರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೊಬ್ಬ ತೀವ್ರ ಗಾಯಗೊಂಡಿರುವ ಘಟನೆ ನಗರದ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಕಾಲೇಜು ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಕುಮಾರ್(30) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ನವೀನ್ (20) ತೀವ್ರ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಇಬ್ಬರು ಶನಿವಾರ ಮಧ್ಯರಾತ್ರಿ ಬೈಕ್‌ನಲ್ಲಿ ವೇಗವಾಗಿ ಹೋಗುವಾಗ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಸ್ಕಿಡ್ ಆಗಿದೆ ಬಿದ್ದಿದ್ದಾರೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ನವೀನ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ಮಡಿವಾಳ ಸಂಚಾರಿ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.





