ರಾಜ್ಯ

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ.

ಹೌದು, ಚಿಕ್ಕಮಗಳೂರಿನ ಭದ್ರಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈಗ ಕರಿಚಿರತೆಯೇ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಭದ್ರಾದಲಕ್ಕವಳ್ಳಿ ಬೋಟ್ ಸಫಾರಿ ಹಾಗೂ ಜೀಪ್ ಸಫಾರಿಯ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಈ ಕಪ್ಪು ಚಿರತೆ ನೋಡಲು ಇದೀಗಾ ದೇಶ ವಿದೇಶಗಳಿಂದ ಪ್ರವಾಸಿಗರ ದಂಡೇ ಭದ್ರಗೆ ಹರಿದು ಬರುತ್ತಿದೆ.

ಬೆಂಗಳೂರು ಮೂಲದ ಅರವಿಂದ್ ಕಾರ್ತಿಕ್ ಎಂಬುವವರು ಈ ಅಪರೂಪದ ಕಪ್ಪುಚಿರತೆಯ ಚಿತ್ರಗಳನ್ನು ಸೆರೆಹಿಡಿದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಚಿರತ ತನ್ನ ಕುಟುಂಬದೊಂದಿಗೆ ಸಿಗುತ್ತಿರುವುದು ಅಪರೂಪವಾಗಿದೆ. ತಾಯಿ ಚಿರತೆ ಮತ್ತು ಎರಡು ಮರಿಗಳು ಒಟ್ಟಾಗಿ ಕಾಣಿಸುತ್ತಿದ್ದು, ಈ ಎರಡು ಮರಿಗಳ ಪೈಕಿ ಒಂದು ಕಪ್ಪು ಚಿರತೆಯಾಗಿದೆ. ಚಿರತೆ ಮತ್ತು ಕಪ್ಪು ಚಿರತೆಯನ್ನು ಒಟ್ಟಾಗಿ ನೋಡುವುದೇ ಒಂದು ಅದೃಷ್ಟ ಎಂದು ಆಂದೋಲನದೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸದ್ಯ ಈಗ ಕಪ್ಪು ಚಿರತೆ ಮತ್ತು ಅದರ ಸಹೋದರ ಚಿರತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಅವುಗಳ ಚೆನ್ನಾಟವನ್ನ ಪ್ರವಾಸಿಗರು ಸೆರೆ ಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

1 hour ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

1 hour ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

1 hour ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

2 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

2 hours ago