ರಾಜ್ಯ

ಸಿ.ಟಿ.ರವಿ ವಿರುದ್ಧದ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ನಾವು ದೇಶಪ್ರೇಮಿ ಮುಸ್ಲಿಮರ ವಿರುದ್ಧ ನಿಂತಿಲ್ಲ

ಬೆಂಗಳೂರು : ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು. ಸಿ.ಟಿ.ರವಿ ಯಾವುದೇ ದ್ವೇಷ ಭಾಷಣ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಮಾಡಿರುವುದನ್ನು ವಿರೋಧಿಸಿ ಮೊದಲ ಬಾರಿಗೆ ದೊಡ್ಡಮಟ್ಟದಲ್ಲಿ ಬಂದ್‌ ನಡೆದಿದೆ. ಸ್ಥಳೀಯರ ಮನೆಗಳಲ್ಲಿ ಯಾರಾದರೂ ಸತ್ತರೆ ತಮಟೆ ಬಾರಿಸುವಂತಿಲ್ಲ, ಮದುವೆ ಮೆರವಣಿಗೆಯಲ್ಲಿ ವಾದ್ಯ ಬಾರಿಸಬಾರದು ಎಂಬ ಸ್ಥಿತಿ ಇದೆ. ಆ ಮಸೀದಿಯನ್ನು ಅಕ್ರಮವಾಗಿ ಕಟ್ಟಲಾಗಿದೆ. ಅಲ್ಲಿನ ಹಿಂದೂಗಳಿಗೆ ಬೆಂಬಲ ನೀಡಲು ಅಲ್ಲಿಗೆ ಹೋಗಿ ಭಾಷಣ ಮಾಡಿದ್ದೇವೆ. ಸಿ.ಟಿ.ರವಿ ಅವರು ದ್ವೇಷ ಭಾಷಣ ಮಾಡಿಲ್ಲ. ಮುಸ್ಲಿಮರು ಪಾಕಿಸ್ತಾನ ಜಿಂದಾಬಾದ್‌ ಅಂದರೂ ಕೇಸು ದಾಖಲಿಸಿಲ್ಲ. ಆದರೆ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ರೀತಿ ಪ್ರಕರಣ ದಾಖಲಿಸಲು ಸಚಿವರ ತಂಡ ರಚಿಸಲಾಗಿದೆ. ಇದು ಸರ್ಕಾರಕ್ಕೆ ತಿರುಗುಬಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ರೀತಿ ದ್ವೇಷ ರಾಜಕಾರಣ ಮಾಡಿದರೆ, ಬಿಜೆಪಿ ಕೂಡ ಮುಂದೆ ಅಧಿಕಾರಕ್ಕೆ ಬಂದಾಗ ಇದೇ ರೀತಿ ಮಾಡುತ್ತದೆ. ಹಿಂದಿನ ಮುಖ್ಯಮಂತ್ರಿಗಳು ಇಂತಹ ದ್ವೇಷ ರಾಜಕಾರಣ ಮಾಡಿಲ್ಲ. ಸಿ.ಟಿ.ರವಿ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೂಡಲೇ ವಾಪಸ್‌ ಪಡೆಯಿರಿ ಎಂದು ಆಗ್ರಹಿಸಿದರು.

ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿತ್ತು. ಈಗ ಮಂಡ್ಯ, ಮೈಸೂರು ಭಾಗಗಳಲ್ಲಿ ಈ ರೀತಿ ಮಾಡುತ್ತಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಮುಸ್ಲಿಮರೇ ಕಲ್ಲು ತೂರಾಟ ಮಾಡಿದ್ದು ಎಂದು ಒಪ್ಪಿಕೊಂಡಿದ್ದಾರೆ. ಹಾಗಾದರೆ ಪೊಲೀಸರು ಕಠಿಣವಾದ ಕಾನೂನು ಕ್ರಮ ಜರುಗಿಸಲಿ. ಮಸೀದಿ ಅಧ್ಯಕ್ಷರು ಕೂಡ ಅದನ್ನು ಒಪ್ಪಿಕೊಂಡಿದ್ದಾರೆ. ಮುಸ್ಲಿಮರಲ್ಲೇ ಭಾರತದ ವಿರುದ್ಧ ಹಾಗೂ ಭಾರತದ ಪರವಾಗಿ ಇರುವ ಎರಡು ತಂಡ ಇದೆ. ನಾವೇನೂ ಮುಸ್ಲಿಮರ ವಿರುದ್ಧವಾಗಿಲ್ಲ. ಅಬ್ದುಲ್‌ ಕಲಾಂ ಅವರನ್ನೇ ರಾಷ್ಟ್ರಪತಿಯಾಗಿ ನಾವು ಒಪ್ಪಿಕೊಂಡಿದ್ದೇವೆ. ಶಿಶುನಾಳ ಷರೀಫರ ಹಾಡುಗಳನ್ನು ನಾನು ಕೇಳಿ ಗೌರವಿಸುತ್ತೇನೆ. ಕವಿ ನಿಸಾರ್‌ ಅಹ್ಮದ್‌ ನನ್ನ ಕ್ಷೇತ್ರದಲ್ಲೇ ಇದ್ದು, ಅವರ ಹೆಸರು ಉಳಿಸಲು ಐದೆಕರೆ ಜಮೀನು ಕೊಡಿಸಿದ್ದೆ. ಇಂತಹ ದೇಶಪ್ರೇಮಿ ಮುಸ್ಲಿಮರ ಬಗ್ಗೆ ನಮಗೇನೂ ತಕರಾರಿಲ್ಲ. ದ್ವೇಷ ಕಾರುವ ಮುಸ್ಲಿಮರನ್ನು ನಾವು ವಿರೋಧಿಸುತ್ತೇವೆ ಎಂದರು.

ಕಾಂಗ್ರೆಸ್‌ ಶಾಸಕ ಬಿಕೆ ಸಂಗಮೇಶ್ವರ್ ಈಗಲೇ ಮುಸ್ಲಿಮ್‌ ಧರ್ಮಕ್ಕೆ ಮತಾಂತರವಾಗಲಿ. ಉಳಿದ ಶಾಸಕರ ಮನಸ್ಥಿತಿ ಕೂಡ ಇದೇ ರೀತಿಯಾಗಿದೆ. ಶಿವಮೊಗ್ಗದಲ್ಲಿ ಕಟೌಟ್‌ಗಳನ್ನು ಹಾಕಿದಾಗಲೇ ಇವರೆಲ್ಲರೂ ಮುಸ್ಲಿಮರಿಗೆ ಬೆಂಬಲ ನೀಡುತ್ತಾರೆ ಎಂಬುದು ಖಚಿತವಾಗಿದೆ. ಇದು ತಾಲಿಬಾನ್‌ ಸರ್ಕಾರವಾಗಿದೆ ಎಂದರು.

ಇವಿಎಂ ತಂದಿದ್ದೇ ಕಾಂಗ್ರೆಸ್‌
ಅಟಲ್‌ ಬಿಹಾರಿ ವಾಜಪೇಯಿ ಅಧಿಕಾರದಲ್ಲಿದ್ದಾಗ ಬ್ಯಾಲೆಟ್‌ ಪೇಪರ್‌ ಇತ್ತು. ನಂತರ ಮನಮೋಹನ್‌ ಸಿಂಗ್‌ ಕಾಲದಲ್ಲಿ ಇವಿಎಂ ಬಂತು. ಆಗ ಇವರು ಅದನ್ನು ವಿರೋಧ ಮಾಡಲಿಲ್ಲ. ಇವಿಎಂ ಬಂದ ನಂತರ ಎರಡು ಚುನಾವಣೆಗಳನ್ನು ಕಾಂಗ್ರೆಸ್‌ ಗೆದ್ದಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿ ಕೂಟದ 15 ಜನರು ವಿರುದ್ಧ ಮತ ಚಲಾಯಿಸಿದ್ದಾರೆ. ಹಾಗಾದರೆ ಮುಂದೆ ಹೆಬ್ಬೆಟ್ಟು ಚುನಾವಣೆ ತರುತ್ತಾರೆಯೇ? ಎಂದು ಪ್ರಶ್ನಿಸಿದರು.

ಈ ಆಧುನಿಕ ಕಾಲದಲ್ಲಿ ಮೊಬೈಲ್‌ನಲ್ಲೇ ಎಲ್ಲ ಮಾಹಿತಿ ಪಡೆಯುತ್ತಾರೆ. ಆದಿಮಾನವ ಕಾಲಕ್ಕೆ ಹೋಗುವುದಾದರೆ ಬ್ಯಾಲೆಟ್‌ ಪೇಪರ್‌ ಬಳಸಬೇಕಾಗುತ್ತದೆ. ಬಿಹಾರದಲ್ಲಿ ಕಾಂಗ್ರೆಸ್‌ನ ಅಸ್ತಿತ್ವ ಇಲ್ಲ. ಅದಕ್ಕಾಗಿ ಪೂರ್ವ ತಯಾರಿ ಮಾಡಿಕೊಂಡು ಜನರ ಮನಸ್ಸಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ. ಇವಿಎಂ ಕಾಂಗ್ರೆಸ್‌ನ ಪ್ರನಾಳ ಶಿಶು. ಈಗ ಅದೇ ಸರಿಯಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಇದನ್ನು ತಂದಿದ್ದು ಏಕೆಂದು ತಿಳಿಸಲಿ. ಇವಿಎಂ ಸುಪ್ರೀಂ ಕೋರ್ಟ್‌ನಲ್ಲೂ ಅನುಮೋದನೆಯಾಗಿದೆ. ಚುನಾವಣಾ ಆಯೋಗ ಹಾಕಿದ ಸವಾಲನ್ನು ಸ್ವೀಕರಿಸಿಲ್ಲ. ಅಫಿಡವಿಟ್‌ ಕೊಡದೆ ಓಡಿಹೋಗಿದ್ದಾರೆ. ಯಾವುದೋ ಸುಳ್ಳು ದಾಖಲೆಗಳನ್ನು ತೋರಿಸಿದ್ದಾರೆ. ಮಹದೇವಪುರ ಕ್ಷೇತ್ರದ ಬಗ್ಗೆ ಈಗ ಯಾರೂ ಮಾತಾಡುತ್ತಿಲ್ಲ. ಜನರಿಗೆ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್‌ನ ಎಂತಹ ಹೀನಾಯ ಸ್ಥಿತಿಗೆ ಹೋಗಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಎಬಿವಿಪಿ ಆಯೋಜಿಸಿದ್ದ ಅಬ್ಬಕ್ಕರಾಣಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದರಲ್ಲಿ ಏನೂ ತಪ್ಪಿಲ್ಲ. ಇದರಲ್ಲಿ ರಾಜಕಾರಣ ಮಾಡುವುದು ಬೇಡ ಎಂದರು.

ಆಂದೋಲನ ಡೆಸ್ಕ್

Recent Posts

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

15 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

34 mins ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

52 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

1 hour ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

1 hour ago

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

1 hour ago