Mysore
34
scattered clouds

Social Media

ಗುರುವಾರ, 23 ಏಪ್ರಿಲ 2026
Light
Dark

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ.

ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ಇ.ಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಹ್ಯಾಕರ್ ಶ್ರೀಕಿ ಜೊತೆ ನಂಟು ಹೊಂದಿದ್ದ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಈ ನಂಟಿನ ಹಿನ್ನೆಲೆಯಲ್ಲೇ ಇ.ಡಿ. ದಾಳಿ ನಡೆಸಿದೆ ಎನ್ನಲಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ 4.5 ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರ ನಡೆದಿದೆ ಎಂದು ಇಡಿ ಈಗಾಗಲೇ ಆರೋಪಿಸಿದೆ. ಈ ಹಿಂದೆ ರಾಜ್ಯ ಸಿಐಡಿ ಕೂಡ ಬಿಟ್‌ಕಾಯಿನ್ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ನಡೆಸಿತ್ತು. ಸದ್ಯ, ಇ.ಡಿಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Tags:
error: Content is protected !!