ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ.
ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಇ.ಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಹ್ಯಾಕರ್ ಶ್ರೀಕಿ ಜೊತೆ ನಂಟು ಹೊಂದಿದ್ದ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ಈ ನಂಟಿನ ಹಿನ್ನೆಲೆಯಲ್ಲೇ ಇ.ಡಿ. ದಾಳಿ ನಡೆಸಿದೆ ಎನ್ನಲಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ 4.5 ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರ ನಡೆದಿದೆ ಎಂದು ಇಡಿ ಈಗಾಗಲೇ ಆರೋಪಿಸಿದೆ. ಈ ಹಿಂದೆ ರಾಜ್ಯ ಸಿಐಡಿ ಕೂಡ ಬಿಟ್‌ಕಾಯಿನ್ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ನಡೆಸಿತ್ತು. ಸದ್ಯ, ಇ.ಡಿಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…