Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಜಾತಿ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗುತ್ತಾರೆ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದರೆ ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಅವರ ಹೈಕಮಾಂಡ್‌ ನಾಯಕರು ಅವರನ್ನು ಕರೆದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ ಈ ಮಟ್ಟಕ್ಕೂ ಅವರು ಬಂದಿದ್ದಾರಾ ಎನ್ನುವ ನೋವಾಗುತ್ತೆ ಎಂದು ಅಪಹಾಸ್ಯ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಸ್ತುತ ತಂದಿರುವ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ತಿರಸ್ಕಾರ ಮಾಡಬೇಕು. ಮತ್ತೊಂದು ಸಮೀಕ್ಷೆ ಮಾಡಿ, ಇನ್ನೂ ಮೂರು ವರ್ಷ ಸಮಯ ಇದೆ. ಆದ್ದರಿಂದ ವರದಿ ತಿರಸ್ಕಾರ ಮಾಡಿ ಎಂದು ಮನವಿ ಮಾಡಿದ್ದಾರೆ.

Tags:
error: Content is protected !!