ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗುತ್ತಾರೆ ಎಂದು ಲೇವಡಿ ಮಾಡಿದರು.
ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದರೆ ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ ಈ ಮಟ್ಟಕ್ಕೂ ಅವರು ಬಂದಿದ್ದಾರಾ ಎನ್ನುವ ನೋವಾಗುತ್ತೆ ಎಂದು ಅಪಹಾಸ್ಯ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಸ್ತುತ ತಂದಿರುವ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ತಿರಸ್ಕಾರ ಮಾಡಬೇಕು. ಮತ್ತೊಂದು ಸಮೀಕ್ಷೆ ಮಾಡಿ, ಇನ್ನೂ ಮೂರು ವರ್ಷ ಸಮಯ ಇದೆ. ಆದ್ದರಿಂದ ವರದಿ ತಿರಸ್ಕಾರ ಮಾಡಿ ಎಂದು ಮನವಿ ಮಾಡಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…