Mysore
31
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ರಾಜ್ಯಕ್ಕೆ ಬರ ಪರಿಹಾರ ನೀಡಲು ಒಪ್ಪಿದ ಕೇಂದ್ರ

ಬೆಂಗಳೂರು: ಏ.29 ರೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ‌ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ ಕೋರ್ಟ್‌ನ ನ್ಯಾ.ಬಿ.ಆರ್‌ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿತು.

ಅರ್ಜಿ ಆಲಿಸಿದ ನ್ಯಾಯಮೂರ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ನೆಲೆಸಬಾರದು ಎಂದು ಹೇಳಿದರು.

ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಇದೇ ತಿಂಗಳ(ಏ.22) ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್‌ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು.

Tags:
error: Content is protected !!