ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ.
ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ.
ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 22 ಜೂನ್ 2025ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮಾಜಿ ಪ್ರಧಾನಿಗಳ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿದ್ದಾರೆ.
ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದರು.
ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮಾವು ಬೆಳೆಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಮುಂದಿನ ದಿನಗಳಲ್ಲಿಯೂ ಇಂತಹದ್ದೇ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ತಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಎಚ್‌ಡಿಡಿ ಸಚಿವರನ್ನು ಕೋರಿದ್ದರು.
NAFED ಮತ್ತು NCCF ಮೂಲಕ ಮಾವಿನ ಖರೀದಿಗಾಗಿ ಬೆಲೆ ಕೊರತೆ ಪಾವತಿ (PDP) ಮತ್ತು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS)ಯನ್ನು ಪ್ರಾರಂಭಿಸುವಂತೆಯೂ ದೇವೇಗೌಡರು ಕೇಂದ್ರವನ್ನು ವಿನಂತಿಸಿದ್ದರು. ಈ ಉಪಕ್ರಮ ಕೈಗೊಳ್ಳುವ ಮೂಲಕ ಬೆಳೆಗಾರರಿಗೆ ಲಾಭದಾಯಕ ಬೆಲೆಗಳು ಮತ್ತು ಆರ್ಥಿಕ ಸಂಕಷ್ಟದಿಂದ ಪರಿಹಾರವನ್ನು ನೀಡುತ್ತದೆ ಎಂದು ಮನವರಿಕೆ ಮಾಡಿದ್ದರು.
ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದು, ಭಾರತ ಸರ್ಕಾರವು ಕರ್ನಾಟಕದಲ್ಲಿ 2025–26ನೆ ಮಾರುಕಟ್ಟೆ ಋತುವಿನಲ್ಲಿ ಬೆಲೆ ಕೊರತೆ ಪಾವತಿ (PDP) ಯೋಜನೆಯಡಿಯಲ್ಲಿ ಕ್ವಿಂಟಲ್‌ಗೆ ₹1,616 ಮಾರುಕಟ್ಟೆ ಹಸ್ತಕ್ಷೇಪ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.
ಸಕಾಲಿಕ ಮಾರುಕಟ್ಟೆ ಮಧ್ಯಸ್ಥಿಕೆ ಮೂಲಕ ರೈತರನ್ನು ಬೆಂಬಲಿಸುವ ಕೇಂದ್ರದ ಬದ್ಧತೆಯನ್ನು ಸಚಿವರು ಪುನರುಚ್ಚರಿಸಿದ್ದು, ಬೆಳೆಗಾರರ ಉತ್ಪನ್ನಗಳಿಗೆ ನ್ಯಾಯಯುತ ಆದಾಯವನ್ನು ಖಚಿತಪಡಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…