ರಾಜ್ಯ

ಪ್ರಣಬ್‌ ಮೊಹಾಂತಿ ಅವರನ್ನು ಕೇಂದ್ರ ಕರೆಸಿಕೊಂಡಿದೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‍ಐಟಿಯ ಮುಖ್ಯಸ್ಥ ಪ್ರಣಬ್ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾdharತನಾಡಿದ ಅವರು, ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗುವುದಾದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ಕಾನೂನು ಪ್ರಕಾರ, ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ ಎಸ್‍ಐಟಿ ತನಿಖೆಯನ್ನು ಮುಂದುವರೆಸಬಹುದೇ ಎಂಬುದರ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದರು.

ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆಯುತ್ತಿದೆ. ಈ ಹಂತದಲ್ಲಿ ಯಾವುದೇ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದು ನಿರ್ಧರಿಸಿದ್ದೇವೆ. ತನಿಖೆಯ ಬಳಿಕ ಎಲ್ಲಾ ಮಾಹಿತಿಗಳೂ ಸಿಗುತ್ತವೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago