ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ, ಅದು ಕಾಂಗ್ರೆಸ್ ಸೃಷ್ಟಿ ಮಾಡಿದ ಭ್ರಮೆ -ಉಸ್ತುವಾರಿ ಅರುಣ್ ಸಿಂಗ್

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ. ಅದು ಕಾಂಗ್ರೆಸ್ ಸೃಷ್ಟಿ ಮಾಡಿದ ಭ್ರಮೆ ಅಷ್ಟೇ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ಆಡಳಿತ ಸಂತೃಪ್ತಿ ತಂದಿದೆ. ತುಂಬಾ ಸರಳ ಸಜ್ಜನ ವ್ಯಕ್ತಿ ಅವರು. ರೈತರಿಗೆ, ಅವರ ಮಕ್ಕಳಿಗೆ ನೇರವಾಗಿ ಅವರ ಖಾತೆಗೆ ಹಣ ವರ್ಗಾವಣೆ, ಬಡವರಿಗೆ ಮನೆ ನಿರ್ಮಾಣ, ಪ್ರವಾಹ ಪರಿಸ್ಥಿತಿಯಲ್ಲಿ ಖುದ್ದಾಗಿ ನಿರ್ವಹಣೆ ಮಾಡಿದ ಕಾರ್ಯ ಪ್ರಶಂಸನಾರ್ಹ. ಹಿಂದಿನ ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರ ದಿಂದ ಮುಳುಗಿತ್ತು. ನಮ್ಮ ನಿಷ್ಕಳಂಕ ಸರಕಾರದ ಮೇಲೆ 40%ಸರ್ಕಾರ ಅಂತ ಆಧಾರರಹಿತ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅಪ್ಪಟ ಹಿಂದೂ ವಿರೋಧಿ. ಕುತಂತ್ರ ಮಾಡೋದು, ಸಿಡಿ ತಯಾರು ಮಾಡೋದು ಕಾಂಗ್ರೆಸ್ ಕೆಲ್ಸ. ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿಗಿಂತ ಕಾಂಗ್ರೆಸ್ ಹೆಚ್ಚಿಗೆ ತಲೆ ಕೆಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ಬಗ್ಗೆ ಅರುಣ್ ಸಿಂಗ್ ಹಾಡಿ ಹೋಗಳಿದ್ದಾರೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯನ್ನು ತಳ್ಳಿ ಹಾಕಿದ್ದಾರೆ.

 

× Chat with us