ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ರೈತ ಸಂಘ ಸಂಸ್ಥೆಗಳ ಸುಮಾರು 218 ಮಂದಿ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು.
ಪಶುಸಂಗೋಪನೆ ಸಚಿವ ವೆಂಕಟೇಶ್ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್ , ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ: ಶಾಲಿನಿ ರಜನೀಶ್ , ರೈತ ಸಂಘಟನೆಗಳ ಮುಖಂಡರಾದ ಬಡಗಲಾಪುರ ನಾಗೇಂದ್ರ, ಎಚ್.ಆರ್ .ಬಸವರಾಜಪ್ಪ, ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರಾದ ಸುನಂದಾ ಜಯರಾಂ ಸೇರಿದಂತೆ ವಿವಿಧ ರೈತ ಸಂಘಟನೆಗಳ 218 ಮಂದಿ ಮುಖಂಡರು ಉಪಸ್ಥಿತರಿದ್ದರು